__gaTracker('send','pageview');

Author archives: shivanandj

Bangalore Bomb Blast

ಬೆಂಗಳೂರಿನ ಮಲ್ಲೇಶ್ವರ ಬಿಜೆಪಿ ಕಚೇರಿ ಮುಂಭಾಗದಲ್ಲಿ ಬಾಂಬ್ ಸ್ಪೋಟ… . ಬೆಂಗಳೂರು, ಏ. 17 : ನಗರದ ಮಲ್ಲೇಶ್ವರ ಬಿಜೆಪಿ ಕಚೇರಿ ಮುಂಭಾಗ ಭಾರೀ ಸ್ಪೋಟ ಸಂಭವಿಸಿದೆ. ಮೂರು ಕಾರುಗಳು ಹೊತ್ತಿ ಉರಿಯುತ್ತಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬುಧವಾರ ಬೆಳಗ್ಗೆ 10.45 ರ ಸುಮಾರಿಗೆ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಈ ಸ್ಪೋಟ ಸಂಭವಿಸಿದೆ. ಮೂರು ಕಾರುಗಳು ಮತ್ತು 2 ಬೈಕ್ ಗಳು ಹೊತ್ತಿ ಉರಿಯತ್ತಿದ್ದು, ಸ್ಥಳದಲ್ಲಿದ್ದ ಜನರು ಬೆಂಕಿ ಆರಿಸಲು ಪ್ರಯತ್ನಿಸುತ್ತಿದ್ದಾರೆ. ಅಗ್ನಿ ಶಾಮಕ ದಳಗಳು ಸ್ಥಳಕ್ಕೆ ಆಗಮಿಸಿವೆ. ಮಲ್ಲೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಮೂರು ಮಂದಿ ಸ್ಪೋಟದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಪೋಟಗೊಂಡಿರುವುದು ಏನು ? ಎಂದು ಮಾಹಿತಿ ನಿರೀಕ್ಷಿಸಲಾಗುತ್ತದೆ. ತಮಿಳುನಾಡು ರಿಜಿಸ್ಟ್ರೀಶನ್ ಬೈಕ್ ನಲ್ಲಿ ಬಾಂಬ್ ಇರಿಸಲಾಗಿತ್ತು ಎನ್ನಲಾಗಿದೆ. ಚುನಾವಣಾ ಸಮಯವಾದ್ದರಿಂದ ಹೆಚ್ಚಿನ ಕಾರ್ಯಕರ್ತರು ಕಚೇರಿ ಬಳಿ ಜಮಾಯಿಸಿದ್ದರು. ಇಬ್ಬರು ಪೊಲೀಸರು, ಒಬ್ಬ ಮಹಿಳಾ ಪೇದೆ ಗಾಯಗೊಂಡಿರುವ ಬಗ್ಗೆ ಪ್ರಾಥಮಿಕ ಮಾಹಿತಿಗಳು […]